Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ಅರಸನಾದ ದಾವೀದನು - ದೇವರು ನನ್ನ ಮಗನಾದ ಸೊಲೊಮೋನನನ್ನೇ ಆರಿಸಿಕೊಂಡಿದ್ದಾನೆ; ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಅಲ್ಲದೆ ಮನುಷ್ಯನಿಗಾಗಿಯಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಅರಸ ದಾವೀದನು, “ದೇವರು ನನ್ನ ಮಗ ಸೊಲೊಮೋನನನ್ನೇ ಆರಿಸಿಕೊಂಡಿದ್ದಾರೆ. ಆದರೆ ಅವನು ಇನ್ನೂ ಚಿಕ್ಕವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟ ತಕ್ಕ ಮಂದಿರ ದೇವರಾದ ಸರ್ವೇಶ್ವರನಿಗಾಗಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:1
17 ತಿಳಿವುಗಳ ಹೋಲಿಕೆ  

ದಾವೀದನು [ತನ್ನ ಮನಸ್ಸಿನಲ್ಲಿ] - ನನ್ನ ಮಗನಾದ ಸೊಲೊಮೋನನು ಎಳೇ ಪ್ರಾಯದವನಾಗಿದ್ದಾನೆ; ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯವು ಎಲ್ಲಾ ದೇಶಗಳಲ್ಲಿ ಕೀರ್ತಿ ಘನಗಳನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾದದ್ದಾಗಿರಬೇಕು; ಆದದರಿಂದ ಅದಕ್ಕೆ ಬೇಕಾಗುವದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವದಕ್ಕೆ ಮೊದಲೇ ಬಹಳವಾಗಿ ಸೌರಣೆಮಾಡಿದನು.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇವಿುಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು;


ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.


ನಾನೂ ನನ್ನ ತಂದೆಗೆ [ಅಧೀನನಾದ] ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.


ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.


ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ.


ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಮಂಡಲಿಯಾದ ಸಮಸ್ತ ಇಸ್ರಾಯೇಲ್ಯರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೇ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವಾಸ್ತ್ಯವಾಗಿರುವದು.


ದಾವೀದನು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನು ಅಂದರೆ ಕುಲಾಧಿಪತಿಗಳು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಅಂತೂ ಎಲ್ಲಾ ಘನವಂತರನ್ನು ಯೆರೂಸಲೇವಿುಗೆ ಕರಿಸಿದನು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ನನ್ನ ಒಡೆಯನೂ ಅರಸನೂ ಆದ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನೀನೇ ಗೊತ್ತುಮಾಡಬೇಕೆಂದು ಇಸ್ರಾಯೇಲ್ಯರೆಲ್ಲರೂ ಕಾದುಕೊಂಡಿರುತ್ತಾರೆ.


ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಕೂಡಿಸುವದಕ್ಕೆ ಆಜ್ಞಾಪಿಸಿ ಅವರಲ್ಲಿದ್ದ ಕಲ್ಲು ಕುಟಿಗರನ್ನು ದೇವಾಲಯ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವದಕ್ಕೆ ನೇವಿುಸಿದನು.


ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಂದರೆ ಅವರ ಶತಾಧಿಪತಿ ಸಹಸ್ರಾಧಿಪತಿಗಳನ್ನೂ ನ್ಯಾಯಾಧಿಪತಿಗಳನ್ನೂ ಗೋತ್ರಪ್ರಧಾನರಾದ ಇಸ್ರಾಯೇಲ್ ಪ್ರಭುಗಳನ್ನೂ ಕರಿಸಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು