Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:11
51 ತಿಳಿವುಗಳ ಹೋಲಿಕೆ  

ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;


ಬಿಡಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿದುಕೊಳ್ಳಿರಿ.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು.


ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ.


ನನ್ನ ದೇವರೇ, ಒಡೆಯನೇ, ನಿನ್ನನ್ನು ಘನಪಡಿಸುವೆನು; ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.


ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.


ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.


ಬಡಗಣ ದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ.


ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ಕೃಷ್ಟನು; ಪ್ರಭಾವಮಹತ್ವಗಳಿಂದ ಭೂಷಿತನಾಗಿದ್ದೀ.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.


ಜನಾಂಗಗಳಲ್ಲಿ ಶ್ರೇಷ್ಠರಾದವರು ಅಬ್ರಹಾಮನ ದೇವರ ಪ್ರಜೆಯಾಗಿರುವದಕ್ಕೆ ಕೂಡಿಬರುತ್ತಾರೆ; ಯಾಕಂದರೆ ಭೂಪಾಲಕರೆಲ್ಲಾ ದೇವರಿಗೇ ಅಧೀನರಾಗಿದ್ದಾರೆ. ಆತನೇ ಸರ್ವೋನ್ನತನು.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನಂದರೆ - ನಮ್ಮ ಪಿತೃವಾಗಿರುವ ಇಸ್ರಾಯೇಲನ ದೇವರೇ, ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.


ಆಕಾಶವು ನಿನ್ನದು, ಭೂವಿುಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವದೆಲ್ಲವನ್ನೂ ನಿರ್ಮಿಸಿದವನು ನೀನು.


ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಕೊಂಡಾಟವಾಗಲಿ! ಜ್ಞಾನತ್ರಾಣಗಳು ಆತನವುಗಳೇ.


ನಿಮಗೆ ಗೊತ್ತಾಗುವದು ಹೇಗಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯುವದು.


ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ಹೊಳೆಯ ನೀರಲ್ಲಿ ಇಡುತ್ತಲೇ ಮೇಲಣಿಂದ ಬರುವ ನೀರು ಮುಂದೆ ಹೋಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವದು ಎಂದು ತಿಳಿಸಿದನು.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ.


ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.


ಮನುಷ್ಯರು ನಿನ್ನ ಭಯಂಕರಕೃತ್ಯಗಳಲ್ಲಿ ಕಂಡುಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು