1 ಪೂರ್ವಕಾಲ ವೃತ್ತಾಂತ 29:14 - ಕನ್ನಡ ಸತ್ಯವೇದವು J.V. (BSI)14 ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ. ಅಧ್ಯಾಯವನ್ನು ನೋಡಿ |