1 ಪೂರ್ವಕಾಲ ವೃತ್ತಾಂತ 29:2 - ಕನ್ನಡ ಸತ್ಯವೇದವು J.V. (BSI)2 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ ಗೋಮೇಧಕ ರತ್ನ, ಕೆತ್ತುವದಕ್ಕೆ ಬೇಕಾಗುವ ರತ್ನ, ಕೆಂಪರಲು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ, ಬಂಗಾರದ ಕೆಲಸಕ್ಕೋಸ್ಕರ ಬಂಗಾರವನ್ನೂ, ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ, ಕಂಚಿನ ಕೆಲಸಕ್ಕೋಸ್ಕರ ಕಂಚನ್ನೂ, ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ, ಮರದ ಕೆಲಸಕ್ಕೋಸ್ಕರ ಮರವನ್ನೂ, ಗೋಮೇಧಿಕ ರತ್ನಗಳನ್ನೂ; ಕೆತ್ತುವುದಕ್ಕೆ ರತ್ನ ವಿಚಿತ್ರವಾದಂಥ ಕಲ್ಲುಗಳನ್ನೂ; ಸಕಲ ಅಮೂಲ್ಯವಾದ ಕಲ್ಲುಗಳನ್ನೂ. ಅಮೃತ ಶಿಲೆಗಳನ್ನೂ ಬಹಳಷ್ಟು ಸಿದ್ಧಮಾಡಿದ್ದೇನೆ. ಅಧ್ಯಾಯವನ್ನು ನೋಡಿ |