1 ಪೂರ್ವಕಾಲ ವೃತ್ತಾಂತ 29:20 - ಕನ್ನಡ ಸತ್ಯವೇದವು J.V. (BSI)20 ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ - ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ಆತನನ್ನೂ ಅರಸನನ್ನೂ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು. ಅಧ್ಯಾಯವನ್ನು ನೋಡಿ |