1 ಪೂರ್ವಕಾಲ ವೃತ್ತಾಂತ 29:23 - ಕನ್ನಡ ಸತ್ಯವೇದವು J.V. (BSI)23 ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕೂತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲ್ಯರೆಲ್ಲರೂ ವಿಧೇಯರಾಗಿ ನಡೆಯುವವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಯೆಹೋವ ದೇವರ ಸಿಂಹಾಸನದ ಮೇಲೆ ಕುಳಿತುಕೊಂಡು, ಸಮೃದ್ಧಿ ಹೊಂದಿದನು. ಸಮಸ್ತ ಇಸ್ರಾಯೇಲರು ಅವನಿಗೆ ವಿಧೇಯರಾದರು. ಅಧ್ಯಾಯವನ್ನು ನೋಡಿ |
ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.