Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:29 - ಕನ್ನಡ ಸತ್ಯವೇದವು J.V. (BSI)

29 ದಾವೀದನ ಪೂರ್ವೋತ್ತರ ಚರಿತ್ರೆಯೂ ಅವನ ಆಳಿಕೆ, ಪರಾಕ್ರಮ, ಅವನಿಗೂ ಇಸ್ರಾಯೇಲ್ಯರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:29
14 ತಿಳಿವುಗಳ ಹೋಲಿಕೆ  

(ಪೂರ್ವಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರಕೇಳಬೇಕಾದರೆ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದರ್ಶಿಗಳೆಂದು ಕರೆಯುತ್ತಿದ್ದರು.)


ಗಾದ್‍ಪ್ರವಾದಿಯು ದಾವೀದನಿಗೆ - ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು ಎಂದು ಹೇಳಿದದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.


ರೆಹಬ್ಬಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ -


ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿ ಬರೆದಿರುತ್ತವೆ.


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯು ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆ, ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.


ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಮಂದಿ; ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಗಳಲ್ಲಿ ಲಿಖಿತವಾಗಿದ್ದವು. ದಾವೀದನೂ ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೋಗಕ್ಕೆ ನೇವಿುಸಿದರು.


ರೆಹಬ್ಬಾಮನ ಪೂರ್ವೋತ್ತರಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಿಯಾದ ಇದ್ದೋ ಎಂಬವರ ಚರಿತ್ರೆಗಳ ವಂಶಾವಳಿಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ಅವನ ಉಳಿದ ಪೂರ್ವೋತ್ತರಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜರ ಗ್ರಂಥದಲ್ಲಿ ಬರೆದಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು