Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:3 - ಕನ್ನಡ ಸತ್ಯವೇದವು J.V. (BSI)

3 ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೋಸ್ಕರ ನನ್ನ ಸ್ವಂತ ಸೊತ್ತಿನಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:3
14 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನು ಒರ್ನಾನನಿಗೆ - ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯ್ದುಕೊಂಡಿರುವದೇ ಲೇಸು.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವಸ್ಥಾನವು ನನಗೆ ಇಷ್ಟ.


ಇಸ್ರಾಯೇಲ್ಯರು ನನಗೋಸ್ಕರ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.


ಯೆಹೋವಾಷನು ಯಾಜಕರಿಗೆ - ನೀವು ಯೆಹೋವನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧದ್ರವ್ಯವನ್ನು ಅಂದರೆ ಖಾನೇಷುಮಾರಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಫೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ ಗೋಮೇಧಕ ರತ್ನ, ಕೆತ್ತುವದಕ್ಕೆ ಬೇಕಾಗುವ ರತ್ನ, ಕೆಂಪರಲು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.


ಮೂರು ಸಾವಿರ ತಲಾಂತು ಒಫೀರ್ ದೇಶದ ಬಂಗಾರವನ್ನೂ ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ.


ಅವನು ನಮ್ಮ ಜನರನ್ನು ಪ್ರೀತಿಸುವವನು, ತಾನೇ ನಮ್ಮ ಸಭಾಮಂದಿರವನ್ನು ನಮಗಾಗಿ ಕಟ್ಟಿಸಿದನು ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು