Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:4 - ಕನ್ನಡ ಸತ್ಯವೇದವು J.V. (BSI)

4 ಮೂರು ಸಾವಿರ ತಲಾಂತು ಒಫೀರ್ ದೇಶದ ಬಂಗಾರವನ್ನೂ ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೂರು ಸಾವಿರ ತಲಾಂತು ಓಫೀರ್ ದೇಶದ ಬಂಗಾರವನ್ನೂ, ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ. ಈ ಬೆಳ್ಳಿ ಬಂಗಾರದಿಂದ ಆಲಯದ ಗೋಡೆಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೂರು ಮೆಟ್ರಿಕ್ ಟನ್ ಒಫೀರ್ ದೇಶದ ಬಂಗಾರವನ್ನೂ ಸುಮಾರು ಇನ್ನೂರ ನಲವತ್ತು ಮೆಟ್ರಿಕ್ ಟನ್ ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನೂರಹತ್ತು ಟನ್ ತೂಕದ ಓಫೀರಿನ ಅಪ್ಪಟ ಬಂಗಾರವನ್ನೂ ದೇವಾಲಯದ ಗೋಡೆಗಳನ್ನು ಮುಚ್ಚಲು ಬೇಕಾದ ಇನ್ನೂರರವತ್ತು ಟನ್ ತೂಕದ ಬೆಳ್ಳಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮನೆಗಳ ಗೋಡೆಗಳನ್ನು ಹೊದಿಸುವುದಕ್ಕೆ ಓಫೀರ್ ಬಂಗಾರದಲ್ಲಿ 100 ಮೆಟ್ರಿಕ್ ಟನ್ ಬಂಗಾರವನ್ನೂ, 240 ಮೆಟ್ರಿಕ್ ಟನ್ ಚೊಕ್ಕ ಬೆಳ್ಳಿಯನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:4
7 ತಿಳಿವುಗಳ ಹೋಲಿಕೆ  

ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.


ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ ಲೆಕ್ಕವಿಲ್ಲದಷ್ಟು ತಾಮ್ರ ಕಬ್ಬಿಣ ಇವುಗಳನ್ನೂ ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳ ಪ್ರಮಾಣದಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತುಮಾಡುವದಕ್ಕಾಗದು.


ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೋಸ್ಕರ ನನ್ನ ಸ್ವಂತ ಸೊತ್ತಿನಿಂದ


ಈ ಬೆಳ್ಳಿ ಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಮಾನುಗಳನ್ನು ಮಾಡಿಸಬೇಕು. ಈಹೊತ್ತು ಉದಾರ ಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವದಕ್ಕೆ ಯಾರು ಮನಸ್ಸುಳ್ಳವರಾಗಿದ್ದಾರೆ ಎಂದು ನೆರೆದ ಸಭೆಗೆ ಹೇಳಲು


ಒಂದೊಂದು ಬೆಳ್ಳಿಯ ಹರಿವಾಣವು 130 ರೂಪಾಯಿ ತೂಕವುಳ್ಳದ್ದು; ಒಂದೊಂದು ಬಟ್ಟಲು 70 ರೂಪಾಯಿ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವರ ಸೇವೆಗೆ ನೇಮಕವಾದ ರೂಪಾಯಿಯ ಪ್ರಕಾರ 2,400 ರೂಪಾಯಿ.


ಹವೀಲಾ, ಯೋಬಾಬ್ ಎಂಬ ಸ್ಥಳಗಳವರು. ಇವರೆಲ್ಲರೂ ಯೊಕ್ತಾನನ ಸಂತಾನದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು