Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:16 - ಕನ್ನಡ ಸತ್ಯವೇದವು J.V. (BSI)

16 ಯೆಹೋಯಾಕೀಮನ ಮಗನು ಯೆಕೊನ್ಯ; ಇವನ ಮಗನು ಚಿದ್ಕೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೆಹೋಯಾಕೀಮನಿಗೆ ಯೆಕೊನ್ಯ ಮತ್ತು ಚಿದ್ಕೀಯ ಎಂಬಿಬ್ಬರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋಯಾಕೀಮನ ಗಂಡುಮಕ್ಕಳು ಯಾರೆಂದರೆ: ಯೆಕೊನ್ಯ ಮತ್ತು ಚಿದ್ಕೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:16
12 ತಿಳಿವುಗಳ ಹೋಲಿಕೆ  

ಆಮೋನನು ಯೋಷೀಯನನ್ನು ಪಡೆದನು. ಪ್ರಜೆಯು ಬಾಬೆಲಿಗೆ ಸೆರೆಹೋದ ಸಮಯದಲ್ಲಿ ಯೋಷೀಯನು ಯೆಕೊನ್ಯನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು.


ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.


ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!


ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬವನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಚಿದ್ಕೀಯ ಎಂಬ ಹೆಸರಿಟ್ಟನು.


ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಯೆರೂಸಲೇವಿುನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.


ಕೊನ್ಯನೆಂಬ ಈ ಮನುಷ್ಯನು ಅಸಡ್ಡೆಗೀಡಾದ ಒಡಕು ಗಡಿಗೆಯೋ? ಯಾರಿಗೂ ಇಷ್ಟವಲ್ಲದ ಮಡಿಕೆಯೋ? ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


ಯೆಹೋಯಾಕೀನನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೋಷೀಯನ ಮಕ್ಕಳು - ಚೊಚ್ಚಲನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ್; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.


ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು -


ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದಾಗ


ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ ಸಾವಕಾಶಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಇದ್ದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು