1 ಪೂರ್ವಕಾಲ ವೃತ್ತಾಂತ 4:42 - ಕನ್ನಡ ಸತ್ಯವೇದವು J.V. (BSI)42 ಇದಲ್ಲದೆ ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಪರ್ವತಕ್ಕೆ ಹೋದರು; ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ, ಉಜ್ಜೀಯೇಲ್ ಎಂಬವರು ಅವರ ಮುಖ್ಯಸ್ಥರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಸಿಮೆಯೋನನ ಕುಲದ ಇತರ ಐದುನೂರು ಜನ ಸದಸ್ಯರು ಸೇಯೀರ್ ಬೆಟ್ಟಪ್ರದೇಶದ ಮೇಲೆ ದಾಳಿಮಾಡಿದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ, ಉಜ್ಜೀಯೇಲ್ ಎಂಬವರು ಅವರ ಮುಖ್ಯಸ್ಥರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿ |