Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:9 - ಕನ್ನಡ ಸತ್ಯವೇದವು J.V. (BSI)

9 ಅಹರ್ಹೇಲನು ಹಾರುಮನ ಮಗನು; ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಘನವಂತನಾಗಿದ್ದನು; ಇವನನ್ನು ಬಹುವೇದನೆಯಿಂದ ಹೆತ್ತೆನೆಂದು ಹೇಳಿ ಇವನ ತಾಯಿ ಇವನಿಗೆ ಯಾಬೇಚೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾಬೇಚ್ ಎಂಬವನು ಒಬ್ಬನಿದ್ದನು. ಅವನು ತನ್ನ ಕುಟುಂಬದಲ್ಲಿ ಬಹಳ ಗೌರವಾನ್ವಿತ ವ್ಯಕ್ತಿ. ಅವನು ಹುಟ್ಟುವಾಗ ಪ್ರಸವವೇದನೆ ಅಧಿಕವಾಗಿದ್ದರಿಂದ ಅವನ ತಾಯಿ, ಯಾಬೇಚ ಎಂಬ ಹೆಸರನ್ನು ಅವನಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಬೇಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ, “ನಾನು ಇವನನ್ನು ವ್ಯಥೆಯಿಂದ ಹೆತ್ತೆನು,” ಎಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:9
10 ತಿಳಿವುಗಳ ಹೋಲಿಕೆ  

ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ದೇವರ ಮಂಜೂಷವು ಶತ್ರುವಶವಾದದರಿಂದಲೂ ಮಾವನೂ ಗಂಡನೂ ಮೃತಿ ಹೊಂದಿದರಿಂದಲೂ - ಮಹಿಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.


ಆ ಯೌವನಸ್ಥನು ಯಾಕೋಬನ ಮಗಳಲ್ಲಿ ಅನುರಕ್ತನಾಗಿದ್ದದರಿಂದ ಅವರು ಹೇಳಿದಂತೆ ಮಾಡುವದಕ್ಕೆ ತಡೆಮಾಡಲಿಲ್ಲ. ಅವನೇ ತನ್ನ ತಂದೆಯ ಮನೆಯವರೆಲ್ಲರಲ್ಲಿ ಘನವಂತನಾಗಿದ್ದನು.


ಅವನು ತನ್ನ ಹೆಂಡತಿಯನ್ನು ಕೂಡಲು ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೊದಗಿದ ಆಪತ್ತಿನಲ್ಲಿ ಸಂಭವಿಸಿದದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.


ಆದರೆ ರಾಹೇಲಳು ಸತ್ತುಹೋದಳು; ಪ್ರಾಣಹೋಗುತ್ತಿರುವಾಗ ಆಕೆಯು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅದರ ತಂದೆಯು ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಲಳು ಮೃತಪಟ್ಟಳು.


ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು.


ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೆ ಬದಲಾಗಿ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.


ಕೋಚನಿಂದ ಆನೂಬ್, ಚೊಬೇಬ ಇವರೂ ಅಹರ್ಹೇಲ್ ಕುಲದವರೂ ಉತ್ಪನ್ನರಾದರು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು