1 ಪೂರ್ವಕಾಲ ವೃತ್ತಾಂತ 5:20 - ಕನ್ನಡ ಸತ್ಯವೇದವು J.V. (BSI)20 ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು. ಅಧ್ಯಾಯವನ್ನು ನೋಡಿ |