Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:6 - ಕನ್ನಡ ಸತ್ಯವೇದವು J.V. (BSI)

6 ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಾಳ್‌ಮಯೊನನ ಮಗನು ಬೇರ. ಅಶ್ಯೂರದ ಅರಸನಾದ ತಿಗ್ಲತ್ಪಿಲೆಸರನು ಬೇರನನ್ನು ಅವನ ಮನೆಯಿಂದ ಹೊರಡಿಸಿದನು; ಬೇರನು ಅವನ ಸೆರೆಯಾಳಾದನು. ಬೇರನು ರೂಬೇನ್ ಕುಲದ ಪ್ರಧಾನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರಿನಿಂದ ಸೆರೆಯಾಗಿ ಒಯ್ದ ಅವನ ಮಗ ಬೇರನು; ಅವನೇ ರೂಬೇನ್ಯರಲ್ಲಿ ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:6
6 ತಿಳಿವುಗಳ ಹೋಲಿಕೆ  

ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.


ಆಹಾಜನು ಅಶ್ಶೂರ್‍ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನಿನ್ನ ದಾಸನೂ ಮಗನೂ ಆಗಿದ್ದೇನೆ; ನೀನು ಬಂದು ನನ್ನನ್ನು ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲ್ಯರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು ಎಂದು ಹೇಳಿಸಿದನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಇವನ ಮಗನು ಶಿಮ್ಮೀ; ಇವನ ಮಗನು ಮೀಕ; ಇವನ ಮಗನು ರೆವಾಯ; ಇವನ ಮಗನು ಬಾಳ್; ಇವನ ಮಗನು ಬೇರ.


ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರಸಂಬಂಧಿಗಳಾಗಿ ಲಿಖಿತರಾದವರು - ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು