Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:15 - ಕನ್ನಡ ಸತ್ಯವೇದವು J.V. (BSI)

15 ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಸೆರೆಯೊಯ್ದಾಗ ಈ ಯೆಹೋಚಾದಾಕನೂ ಅವರೊಡನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಸೆರೆಗೆ ಕಳುಹಿಸಿದ ಜುದೇಯದ ಮತ್ತು ಜೆರುಸಲೇಮಿನ ಇತರ ಜನರೊಂದಿಗೆ ಅರಸ ನೆಬೂಕದ್ನೆಚ್ಚರನು ಯೆಹೋಚಾದಾಕನನ್ನು ಗಡೀಪಾರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ ಮತ್ತು ಜೆರುಸಲೇಮಿನ ಜನರು ಸೆರೆ ಒಯ್ಯಲ್ಪಟ್ಟಾಗ ಯೆಹೋಚಾದಾಕನೂ ಅವರೊಂದಿಗೆ ಪರದೇಶಕ್ಕೆ ಹೋಗಬೇಕಾಯಿತು. ಯೆಹೋವನು ಯೆಹೂದ್ಯರನ್ನು ಮತ್ತು ಜೆರುಸಲೇಮಿನವರನ್ನು ಪರದೇಶಕ್ಕೆ ಸೆರೆಯಾಳುಗಳಾಗಿ ಒಯ್ಯಲು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ, ಯೆರೂಸಲೇಮಿನವರನ್ನು ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:15
17 ತಿಳಿವುಗಳ ಹೋಲಿಕೆ  

ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್ ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಜನಶೇಷ, ಇವರೆಲ್ಲರಿಗೆ ಹೀಗೆ ನುಡಿ -


ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು,


ಕೂಡಲೆ ಶೆಯಲ್ತೀಯೇಲನ ಮಗನೂ ಯೆಹೂದ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವೆಲ್ಲರ ಮನಸ್ಸುಗಳನ್ನು ಯೆಹೋವನು ಪ್ರೇರಿಸಲು


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ - ಅವನು ತನ್ನ ಆಳಿಕೆಯ ಏಳನೆಯ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು;


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಅವರನ್ನು ಭೂಲೋಕದಿಂದ ನಿರ್ನಾಮ ಮಾಡುವದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ರಕ್ಷಿಸಿದನು.


ಅದಕ್ಕೆ ಮೋಶೆ - ಸ್ವಾಮೀ, ಈ ಕಾರ್ಯಕ್ಕೆ ಬೇರೊಬ್ಬನನ್ನು ನೇವಿುಸಬೇಕು ಎನ್ನಲು


ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು.


ಲೇವಿಯ ಮಕ್ಕಳು - ಗೇರ್ಷೋಮ್, ಕೆಹಾತ್, ಮೆರಾರೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು