Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:3 - ಕನ್ನಡ ಸತ್ಯವೇದವು J.V. (BSI)

3 ಅಮ್ರಾಮನ ಮಕ್ಕಳು - ಆರೋನ್, ಮೋಶೆ, ವಿುರ್ಯಾಮ್. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಮ್ರಾಮನ ಮಕ್ಕಳು: ಆರೋನ, ಮೋಶೆ ಮತ್ತು ಮಿರ್ಯಾಮಳು. ಆರೋನನ ಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಮ್ರಾಮನ ಪುತ್ರರು: ಆರೋನನು, ಮೋಶೆಯು, ಮಿರ್ಯಾಮಳು. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:3
18 ತಿಳಿವುಗಳ ಹೋಲಿಕೆ  

ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ


ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾನನು ನೂರಮೂವತ್ತೇಳು ವರುಷ ಬದುಕಿದನು.


ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ವಿುಕ್ಕಿರುವ ನೈವೇದ್ಯದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು.


ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಅಮ್ರಾಮನ ಮಕ್ಕಳು - ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ ಸೇವಿಸುವವರೂ ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರತಕ್ಕದ್ದು.


[ಜನರೆಲ್ಲರಿಗೋಸ್ಕರ] ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತನ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು -


ಇದಲ್ಲದೆ ನನಗೆ ಯಾಜಕಸೇವೆ ಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ಯರಲ್ಲಿಂದ ನಿನ್ನ ಹತ್ತಿರಕ್ಕೆ ಕರಿಸಬೇಕು.


ಯೆಹೋವನು ಮೋಶೆಗೆ - ನೀನೂ ಆರೋನ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬೀಳಬೇಕು.


ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು.


ಆಗಲೇ ಅದರ ಅಕ್ಕ ಬಂದು ಫರೋಹನ ಕುಮಾರ್ತೆಗೆ - ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಲೋ ಎಂದು ಕೇಳಲು


ಕೂಸಿಗೆ ಏನಾಗುವದೆಂದು ತಿಳುಕೊಳ್ಳುವದಕ್ಕೆ ಅದರ ಅಕ್ಕನು ಸ್ವಲ್ಪದೂರದಲ್ಲಿ ನಿಂತುಕೊಂಡಳು.


ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್.


ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು.


ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಅವನ ಕುಟಂಬದವರಾದ ನೂರ ಹನ್ನೆರಡು ಮಂದಿಯೂ.


ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


ಇಚ್ಹಾರನ ಸಂತಾನದವನಾದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು