Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:32 - ಕನ್ನಡ ಸತ್ಯವೇದವು J.V. (BSI)

32 ಸೊಲೊಮೋನನು ಯೆರೂಸಲೇವಿುನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯಸೇವೆಯನ್ನು ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅರಸ ಸೊಲೊಮೋನ ದೇವಾಲಯವನ್ನು ಕಟ್ಟಿಸುವುದಕ್ಕಿಂತ ಪೂರ್ವದಲ್ಲಿ ಅವರು ಸರ್ವೇಶ್ವರನ ದರ್ಶನದ ಡೇರೆಯ ಬಳಿಯಲ್ಲಿ ಕ್ರಮಪ್ರಕಾರ ಅನುದಿನವೂ ಕಾರ್ಯ ನಿರ್ವಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಪವಿತ್ರ ಗುಡಾರದಲ್ಲಿ ಹಾಡುವುದೇ ಇವರ ದೇವರ ಸೇವೆಯಾಗಿತ್ತು. ಸೊಲೊಮೋನನು ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ತನಕ ಇವರು ಗುಡಾರದಲ್ಲಿ ತಮಗೆ ಹೇಳಿರುವ ಪ್ರಕಾರವೇ ಸೇವೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟುವವರೆಗೆ, ಈ ವಾದ್ಯಗಾರರು ಸಭೆಯ ಗುಡಾರದ ನಿವಾಸದ ಮುಂದೆ ಸೇವಿಸುತ್ತಾ ಇದ್ದರು. ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:32
20 ತಿಳಿವುಗಳ ಹೋಲಿಕೆ  

ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ ಯೆರೂಸಲೇವಿುನ ದೇವರ ಸೇವೆಗೆ ನೇವಿುಸಿದರು.


ಆಸಾಫ್ಯರಾದ ಗಾಯಕರು ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವದಕ್ಕೆ ಕಾರಣವಿರಲಿಲ್ಲ.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.


ವಾದ್ಯಗಾರರ ಪಟ್ಟಿ. ಅವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳೂ ಕೆಲಸದಲ್ಲಿರುತ್ತಿದ್ದದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.


ಯೋಹಾನಾನನು ಅಜರ್ಯನನ್ನು ಪಡೆದನು; ಸೊಲೊಮೋನನು ಕಟ್ಟಿಸಿದ ಯೆರೂಸಲೇವಿುನ ದೇವಾಲಯದಲ್ಲಿ ಯಾಜಕಸೇವೆಮಾಡುತ್ತಿದ್ದವನು ಇವನೇ.


ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇವಿುಸಲ್ಪಟ್ಟವರ ಪಟ್ಟಿ.


ದೇವಾಲಯಸೇವಕರೂ ಅವರ ವಂಶಾವಳಿಯೂ - ಕೆಹಾತ್ಯನಾದ ಹೇಮಾನನು [ಮೊದಲನೆಯವನು].


ಆಮೇಲೆ ಅವನು ನನ್ನನ್ನು ಒಳಗಣ ಪ್ರಾಕಾರಕ್ಕೆ ಕರತಂದನು; ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು; ಬಡಗಣ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ತೆಂಕಲಿಗೆ ಅಭಿಮುಖವಾಗಿತ್ತು; ತೆಂಕಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆಯು ಬಡಗಲಿಗೆ ಅಭಿಮುಖವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು