1 ಪೂರ್ವಕಾಲ ವೃತ್ತಾಂತ 6:49 - ಕನ್ನಡ ಸತ್ಯವೇದವು J.V. (BSI)49 ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗನುಸಾರವಾಗಿ ಆರೋನನೂ ಅವನ ಮಕ್ಕಳೂ ಇಸ್ರಾಯೇಲ್ಯರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮಮಾಡುತ್ತಾ ಧೂಪಹಾಕುತ್ತಾ ಮಹಾಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ ದೋಷಪರಿಹಾರ ಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆದರೆ ಆರೋನನೂ, ಅವನ ಪುತ್ರರೂ ದಹನಬಲಿಯ ಪೀಠದ ಮೇಲೆಯೂ, ಧೂಪವನ್ನು ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಳದ ಸಮಸ್ತ ಕಾರ್ಯಕ್ಕೂ, ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ನೇಮಕವಾಗಿದ್ದರು. ಅಧ್ಯಾಯವನ್ನು ನೋಡಿ |