Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:50 - ಕನ್ನಡ ಸತ್ಯವೇದವು J.V. (BSI)

50 ಆರೋನನ ಸಂತಾನದವರು - ಆರೋನನ ಮಗನು ಎಲ್ಲಾಜಾರ್; ಇವನ ಮಗನು ಫೀನೆಹಾಸ್; ಇವನ ಮಗನು ಅಬೀಷೂವ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆರೋನನ ವಂಶಜರು: ಎಲ್ಲಾಜಾರ್, ಫೀನೆಹಾಸ್, ಅಬೀಷೂವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಇವರು ಆರೋನನ ಗಂಡುಮಕ್ಕಳು: ಎಲ್ಲಾಜಾರನು ಆರೋನನ ಮಗ. ಫೀನೆಹಾಸನು ಎಲ್ಲಾಜಾರನ ಮಗ. ಅಬೀಷೂವನು ಫೀನೆಹಾಸನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆರೋನನ ವಂಶಜರು: ಅವನ ಮಗನು ಎಲಿಯಾಜರನು, ಅವನ ಮಗನು ಫೀನೆಹಾಸನು, ಅವನ ಮಗನು ಅಬೀಷೂವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:50
13 ತಿಳಿವುಗಳ ಹೋಲಿಕೆ  

ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.


ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು.


ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿ


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನರಿಗೆ ಅಧ್ಯಕ್ಷನಾಗಿ ದೇವಸ್ಥಾನವನ್ನು ಕಾಯುವವರ ಮೇಲ್ವಿಚಾರಕನಾಗಿರಬೇಕು.


ನಾದಾಬ್ ಅಬೀಹೂ ಎಂಬಿಬ್ಬರು ಸೀನಾಯಿ ಅರಣ್ಯದಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು; ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಈತಾಮಾರ್ ಎಂಬಿಬ್ಬರು ತಂದೆಯ ಕೈಕೆಳಗೆ ಯಾಜಕಧರ್ಮವನ್ನು ನಡಿಸಿದರು.


[ಜನರೆಲ್ಲರಿಗೋಸ್ಕರ] ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತನ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು -


ಇದಲ್ಲದೆ ನನಗೆ ಯಾಜಕಸೇವೆ ಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ಯರಲ್ಲಿಂದ ನಿನ್ನ ಹತ್ತಿರಕ್ಕೆ ಕರಿಸಬೇಕು.


ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು.


ಇವನ ಮಗನು ಬುಕ್ಕೀ; ಇವನ ಮಗನು ಉಜ್ಜೀ; ಇವನ ಮಗನು ಜೆರಹ್ಯಾಹ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು