Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:8 - ಕನ್ನಡ ಸತ್ಯವೇದವು J.V. (BSI)

8 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಚಾದೋಕ, ಅಹೀಮಾಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಹೀಟೂಬನ ಮಗ ಚಾದೋಕ. ಚಾದೋಕನ ಮಗ ಅಹೀಮಾಚ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಹೀಟೂಬನು ಚಾದೋಕನನ್ನು ಪಡೆದನು, ಚಾದೋಕನು ಅಹೀಮಾಚನನ್ನು ಪಡೆದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:8
19 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಯಾಜಕನಾದ ಚಾದೋಕನಿಗೆ - ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು, ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.


ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು;


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು.


ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ಕೆರೇತ್ಯ ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರ ಕತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಅಭಿಷೇಕಿಸಲಿ; ಅನಂತರ ಕೊಂಬನ್ನೂದಿರಿ; ಎಲ್ಲರೂ ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಲಿ.


ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.


ಶೆವನು ಲೇಖಕನು; ಚಾದೋಕ್ ಎಬ್ಯಾತಾರರು ಯಾಜಕರು;


ಚಾದೋಕನ ಮಗನಾದ ಅಹೀಮಾಚನು ತಿರಿಗಿ ಯೋವಾಬನಿಗೆ - ಆಗುವದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವದಕ್ಕೆ ನನಗೆ ಅಪ್ಪಣೆಕೊಡು ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು - ಮಗನೇ, ಯಾಕೆ ಹೋಗಬೇಕನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವದಿಲ್ಲವಲ್ಲಾ ಅಂದನು.


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು


ಅಬ್ಷಾಲೋಮನ ಸೇವಕರು ಸ್ತ್ರೀಯ ಮನೆಗೆ ಹೋಗಿ - ಅಹೀಮಾಚ್ ಯೋನಾತಾನರೆಲ್ಲಿ ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು - ಅವರು ಹಳ್ಳದಾಟಿ ಹೋಗಿ ಬಿಟ್ಟರು ಎಂದು ಉತ್ತರ ಕೊಟ್ಟಳು. ಅವರು ಅವರನ್ನು ಹುಡುಕುವದಕ್ಕೆ ಹೋಗಿ ಕಾಣದೆ ಯೆರೂಸಲೇವಿುಗೆ ಹಿಂದಿರುಗಿದರು.


ಯೋನಾತಾನ್ ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಇವರು ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತು ಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಗೆ ಬರಲಿಲ್ಲ.


ತರುವಾಯ ಹೂಷೈಯು ಯಾಜಕರಾದ ಚಾದೋಕ ಎಬ್ಯಾತಾರರಿಗೆ - ಅಹೀತೋಫೆಲನು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು; ನಾನು ಹೀಗೆ ಹೀಗೆ ಹೇಳಿದೆನು.


ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು;


ಅಹೀಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;


ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ ಅವನ ಕುಟುಂಬದವರಾದ ಇಪ್ಪತ್ತೆರಡು ಮಂದಿ ಅಧಿಪತಿಗಳೂ;


ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರತಿಯ ಮೇಲೆ ಸೇವಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು