1 ಪೂರ್ವಕಾಲ ವೃತ್ತಾಂತ 7:23 - ಕನ್ನಡ ಸತ್ಯವೇದವು J.V. (BSI)23 ಅವನು ತನ್ನ ಹೆಂಡತಿಯನ್ನು ಕೂಡಲು ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೊದಗಿದ ಆಪತ್ತಿನಲ್ಲಿ ಸಂಭವಿಸಿದದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅನಂತರ ಅವನು ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗರ್ಭಧರಿಸಿ ಗಂಡು ಮಗುವಿಗೆ ಜನ್ಮವಿತ್ತಳು. ತಮ್ಮ ಕುಟುಂಬಕ್ಕೆ ಬಂದಿದ್ದ ಕಂಟಕದ ಜ್ಞಾಪಕಾರ್ಥವಾಗಿ ಅವನಿಗೆ ಬೆರೀಯ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅನಂತರ ಎಫ್ರಾಯೀಮನ ಹೆಂಡತಿಯು ಇನ್ನೊಂದು ಗಂಡುಮಗುವನ್ನು ಹೆತ್ತಳು. ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯ ನೆನಪಿಗಾಗಿ ಇವನಿಗೆ “ಬೆರೀಯ” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನು ತನ್ನ ಹೆಂಡತಿಯ ಬಳಿಗೆ ಸೇರಿದಾಗ, ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |