1 ಪೂರ್ವಕಾಲ ವೃತ್ತಾಂತ 7:29 - ಕನ್ನಡ ಸತ್ಯವೇದವು J.V. (BSI)29 ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮನಸ್ಸೆಯ ಸಂತಾನದವರು ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಗ್ರಾಮಗಳನ್ನೂ ತಮ್ಮ ವಶದಲ್ಲಿಟ್ಟುಕೊಂಡಿದ್ದರು. ಯಕೋಬನ ಮಗ ಜೋಸೆಫನ ಸಂತತಿಯವರು ಈ ಎಲ್ಲಾ ಪ್ರದೇಶಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಈ ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |