1 ಪೂರ್ವಕಾಲ ವೃತ್ತಾಂತ 7:4 - ಕನ್ನಡ ಸತ್ಯವೇದವು J.V. (BSI)4 ಅನೇಕ ಮಂದಿ ಹೆಂಡರೂ ಮಕ್ಕಳೂ ಉಳ್ಳ ಇವರ ಗೋತ್ರಕುಟುಂಬಗಳಿಗೆ ಸೇರುವ ಯುದ್ಧಭಟರು ಮೂವತ್ತಾರು ಸಾವಿರ ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವರಿಗೆ ಅನೇಕ ಪತ್ನಿಯರೂ ಮಕ್ಕಳೂ ಇದ್ದು ಅವರ ವಂಶಜರಲ್ಲಿ -36,000 ಪುರುಷರನ್ನು ಸೈನ್ಯದಲ್ಲಿ ಸೇವೆಮಾಡಲು ಒದಗಿಸಿಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇವರ ಸಂಗಡ ಅವರ ವಂಶಗಳ ಪ್ರಕಾರವೂ, ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ 36,000 ಮಂದಿ ಯುದ್ಧವೀರರ ಗುಂಪುಗಳಿದ್ದವು. ಏಕೆಂದರೆ ಅವರ ಹೆಂಡತಿಯರು, ಮಕ್ಕಳು ಬಹಳ ಮಂದಿ ಇದ್ದರು. ಅಧ್ಯಾಯವನ್ನು ನೋಡಿ |