1 ಪೂರ್ವಕಾಲ ವೃತ್ತಾಂತ 9:19 - ಕನ್ನಡ ಸತ್ಯವೇದವು J.V. (BSI)19 ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ ಅವನ ಗೋತ್ರ ಬಂಧುಗಳಾದ ವಿುಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕಸೇವೆಗೆ ನೇವಿುಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶಸ್ಥಳವನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕೋರೇಯನ ಮಗನೂ ಎಬ್ಯಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನು ಹಾಗೂ ಕೋರಹನ ಗೋತ್ರದ ಸದಸ್ಯರು, ದೇವದರ್ಶನದ ಗುಡಾರದ ದ್ವಾರವನ್ನು ಕಾಯುವ ಜವಬ್ದಾರಿ ವಹಿಸಿಕೊಂಡು ಇದ್ದರು.ಅವರ ಪೂರ್ವಜರು ಸಹ ಸರ್ವೇಶ್ವರನ ಗುಡಾರವನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು. ಅಧ್ಯಾಯವನ್ನು ನೋಡಿ |