Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:20 - ಕನ್ನಡ ಸತ್ಯವೇದವು J.V. (BSI)

20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:20
13 ತಿಳಿವುಗಳ ಹೋಲಿಕೆ  

ಸೇವಕರಲ್ಲೊಬ್ಬನು ಅವನಿಗೆ - ಬೇತ್ಲೆಹೇವಿುನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲವನೂ ಪರಾಕ್ರಮಶಾಲಿಯೂ ರಣಶೂರನೂ ವಾಕ್ಚತುರನೂ ಸುಂದರನೂ ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆಂದು ತಿಳಿಸಿದನು.


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಕೈ ಕೆಳಗೆ ಅದನ್ನು ನಡಿಸಬೇಕು.


ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ ಪರಿಮಳಧೂಪವನ್ನೂ ನಿತ್ಯವಾಗಿ ನೈವೇದ್ಯ ಮಾಡುವ ಧಾನ್ಯದ್ರವ್ಯವನ್ನೂ ಅಭೀಷೇಕ ತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನರಿಗೆ ಅಧ್ಯಕ್ಷನಾಗಿ ದೇವಸ್ಥಾನವನ್ನು ಕಾಯುವವರ ಮೇಲ್ವಿಚಾರಕನಾಗಿರಬೇಕು.


ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ ಅವನ ಗೋತ್ರ ಬಂಧುಗಳಾದ ವಿುಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕಸೇವೆಗೆ ನೇವಿುಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶಸ್ಥಳವನ್ನು ಕಾಯುವವರಾಗಿದ್ದರು.


ಯೆಹೋವನು ಯೋಸೇಫನ ಸಂಗಡ ಇದ್ದದರಿಂದ ಅವನು ಏಳಿಗೆಯಾಗಿ ಐಗುಪ್ತ್ಯನಾದ ತನ್ನ ದಣಿಯ ಮನೆಯೊಳಗೆ ಸೇವಕನಾದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದು


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಆದರೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇವರ ಬಳಿಗೆ ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು