Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:24 - ಕನ್ನಡ ಸತ್ಯವೇದವು J.V. (BSI)

24 ಪೂರ್ವ ಪಶ್ಚಿಮ ಉತ್ತರ ದಕ್ಷಿಣ ಈ ದಿಕ್ಕುಗಳಲ್ಲಿರುವ ಬಾಗಲುಗಳನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳಲ್ಲಿ ಒಂದೊಂದು ದ್ವಾರ ಇದ್ದು ಪ್ರತಿಯೊಂದಕ್ಕೂ ಒಬ್ಬೊಬ್ಬ ಪ್ರಮುಖ ದ್ವಾರಪಾಲಕನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:24
5 ತಿಳಿವುಗಳ ಹೋಲಿಕೆ  

ಅಲ್ಲಿಂದ ಹೊರಟು ಊರುಬಾಗಲಿಗೆ ಬಂದು ಕಾಯುವವರಿಗೆ - ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯ ಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳು ಅಲ್ಲಲ್ಲಿ ಕಟ್ಟಲ್ಪಟ್ಟಿರುತ್ತವೆ, ಡೇರೆಗಳು ಇದ್ದ ಹಾಗೆಯೇ ಇರುತ್ತವೆ ಎಂದು ಕೂಗಿ ತಿಳಿಸಿದರು.


ಅವರೂ ಅವರ ಮಕ್ಕಳೂ ಯೆಹೋವನ ಮಂದಿರದ ಅಂದರೆ ಗುಡಾರದ ಬಾಗಲುಗಳನ್ನು ಕಾಯುತ್ತಿದ್ದರು.


ಗ್ರಾಮಗಳಲ್ಲಿದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸಮಾಡುವದಕ್ಕೋಸ್ಕರ ಸರತಿಯ ಮೇಲೆ ಏಳೇಳು ದಿವಸ ಬರಬೇಕಾಯಿತು.


ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು