Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:28 - ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ಅವರಲ್ಲಿ ಕೆಲವರು ಪೂಜಾಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರಿಗಿ ತೆಗೆದುಕೊಳ್ಳುವಾಗಲೂ ಲೆಕ್ಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪೂಜಾಸಾಮಗ್ರಿಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಇತರ ಲೇವಿಯರದಾಗಿತ್ತು. ಅವುಗಳನ್ನು ಕೊಡುವಾಗಲೂ ಮರಳಿ ತೆಗೆದುಕೊಳ್ಳುವಾಗಲೂ ಲೆಕ್ಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವರಲ್ಲಿ ಕೆಲವರು ದೇವಾಲಯದ ಪಾತ್ರೆಗಳಿಗೆ ಮೇಲ್ವಿಚಾರಕರಾಗಿದ್ದು ಅವುಗಳನ್ನು ಒಳಗೆ ತರುವಾಗಲೂ ಹೊರಗೆ ತೆಗೆದುಕೊಂಡು ಹೋಗುವಾಗಲೂ ಲೆಕ್ಕಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸೇವೆಯ ಸಲಕರಣೆಗಳನ್ನು ಒಳಗೆ ಲೆಕ್ಕದ ಪ್ರಕಾರ ತರುವುದಕ್ಕೂ, ಹೊರಗೆ ಲೆಕ್ಕದ ಪ್ರಕಾರ ತರುವುದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:28
9 ತಿಳಿವುಗಳ ಹೋಲಿಕೆ  

ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾದದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂವಿುಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇವಿುಸಿದರು.


ಅವರು ರಾತ್ರಿಯಲ್ಲಿಯೂ ದೇವಾಲಯದ ಸುತ್ತಲೂ ಇಳುಕೊಂಡು ಅವುಗಳನ್ನು ಕಾಯುತ್ತಿದ್ದರು; ಪ್ರತಿದಿನ ಬೆಳಿಗ್ಗೆ ಅವುಗಳನ್ನು ತೆರೆಯುತ್ತಿದ್ದರು.


ಇನ್ನು ಕೆಲವರು ದೇವಾಲಯದ ಎಲ್ಲಾ ಸಾಮಾನುಗಳ ಮೇಲ್ವಿಚಾರಕರೂ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.


ದೇವಸ್ಥಾನದ ಸೇವೋಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು ಕಡಲುಹಂದಿಯ ತೊಗಲನ್ನು ಹೊದಿಸಿ ಅಡ್ಡದಂಡಕ್ಕೆ ಕಟ್ಟಬೇಕು.


ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು