Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:29 - ಕನ್ನಡ ಸತ್ಯವೇದವು J.V. (BSI)

29 ಇನ್ನು ಕೆಲವರು ದೇವಾಲಯದ ಎಲ್ಲಾ ಸಾಮಾನುಗಳ ಮೇಲ್ವಿಚಾರಕರೂ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇತರರು ಬೇರೆ ಪವಿತ್ರ ಸಲಕರಣೆಗಳಾದ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಹಾಗೂ ಪರಿಮಳ ದ್ರವ್ಯಗಳ ಸರಬರಾಜು ಮಾಡುವ ಜವಾಬ್ದಾರಿಕೆ ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರಲ್ಲಿ ಕೆಲವರು ಸಲಕರಣೆಗಳನ್ನೂ, ಪರಿಶುದ್ಧ ಸ್ಥಾನದಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ, ನಯವಾದ ಹಿಟ್ಟನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಸಾಂಬ್ರಾಣಿಯನ್ನೂ, ಸುಗಂಧಗಳನ್ನೂ ಕಾಯಲು ನೇಮಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:29
5 ತಿಳಿವುಗಳ ಹೋಲಿಕೆ  

ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ


ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಅವರಿಗೆ ಅಪ್ಪಣೆಯನ್ನು ಮಾಡು.


ಇದಲ್ಲದೆ ಅವರಲ್ಲಿ ಕೆಲವರು ಪೂಜಾಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರಿಗಿ ತೆಗೆದುಕೊಳ್ಳುವಾಗಲೂ ಲೆಕ್ಕಿಸುತ್ತಿದ್ದರು.


ಅವನು ಯಾಜಕರನ್ನೂ ಲೇವಿಯರನ್ನೂ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು