Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:31 - ಕನ್ನಡ ಸತ್ಯವೇದವು J.V. (BSI)

31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ರೊಟ್ಟಿಸುಡುವ ಕೆಲಸದ ಮೇಲ್ವಿಚಾರಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಕೋರಹಿಯ ಗೋತ್ರದ ಶಲ್ಲೂಮನ ಚೊಚ್ಚಲು ಮಗ ಮತ್ತಿತ್ಯ ಎಂಬ ಲೇವಿಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:31
10 ತಿಳಿವುಗಳ ಹೋಲಿಕೆ  

ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ ಅವನ ಗೋತ್ರ ಬಂಧುಗಳಾದ ವಿುಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕಸೇವೆಗೆ ನೇವಿುಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶಸ್ಥಳವನ್ನು ಕಾಯುವವರಾಗಿದ್ದರು.


ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಮಂದಿ; ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಗಳಲ್ಲಿ ಲಿಖಿತವಾಗಿದ್ದವು. ದಾವೀದನೂ ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೋಗಕ್ಕೆ ನೇವಿುಸಿದರು.


ಲೇವಿಯರಾದ ಮೇಲ್ಕಂಡ ನಾಲ್ಕು ಮಂದಿ ದ್ವಾರಪಾಲಕ ಮುಖ್ಯಸ್ಥರು ಜವಾಬುದಾರರಾಗಿದ್ದು ದೇವಾಲಯದ ಕೋಣೆಗಳನ್ನೂ ಭಂಡಾರಗಳನ್ನೂ ನೋಡಿಕೊಳ್ಳುವವರಾಗಿದ್ದರು.


ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಇವರೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.


ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗ ಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.


ನೀವು ಅರ್ಪಿಸುವದು ಬಾಂಡ್ಲೆಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯಿದ ಗೋದಿಹಿಟ್ಟಿನದಾಗಿರಬೇಕು.


ನೀವು ಅರ್ಪಿಸುವದು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.


ಅನ್ನಲು ಅವನು ಅವರನ್ನು ಬಹಳ ಬಲವಂತಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.


ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ


ಧಾನ್ಯನೈವೇದ್ಯ ವಿಷಯವಾದ ನಿಯಮಗಳು. ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು