Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:11 - ಕನ್ನಡ ಸತ್ಯವೇದವು J.V. (BSI)

11 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕ್ರಿಸ್ತಾಚ್ಯಾ ತರಾಸಾಂಚ್ಯಾ ವಿಶಯಾತ್ ಅನಿ ತ್ಯಾ ತರಾಸಾಂಚ್ಯಾ ಮಾನಾ ತೆಕಾ ಗಾವುಚೆ ಮನುನ್ ಹೊತ್ತ್ಯಾ ಮಹಿಮೆಚ್ಯಾ ವಿಶಯಾತ್ ಕ್ರಿಸ್ತಾಚ್ಯಾಚ್ ಆತ್ಮ್ಯಾನ್ ತೆಂಕಾ ದಾಕ್ವುನ್ ದಿಲ್ಲ್ಯಾನ್ ಹೆ ಸಗ್ಳ್ಯೆ ಖಲ್ಯಾ ಯೆಳಾರ್, ಅನಿ ಕೊನಾಚ್ಯಾ ವಿಶಯಾತ್ ಘಡ್ತಾ ಮನುನ್ ತೆನಿ ಹುಡ್ಕುನ್ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:11
29 ತಿಳಿವುಗಳ ಹೋಲಿಕೆ  

ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ಮೂಸ್ಯಕ್ಕೆ ಎದುರಾಗಿ ಬಂದಾಗ ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು