1 ಪೇತ್ರನು 1:17 - ಕನ್ನಡ ಸತ್ಯವೇದವು J.V. (BSI)17 ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೆಂಚ್ಯಾ ತೆಂಚ್ಯಾ ಕರ್ನ್ಯಾಂಚ್ಯಾ ಸಾರ್ಕೆ ತಿರ್ಮಾನ್ ಕರ್ತಲ್ಯಾ ದೆವಾಕ್ ತುಮಿ ಬಾಬಾ ಮನುನ್ ಬಲ್ವುಲ್ಯಾಸಿ, ತಸೆ ಹೊಲ್ಯಾರ್, ಹ್ಯಾ ಭಾಯ್ಲ್ಯಾ ಗಾಂವಾತ್ ತುಮಿ ತುಮ್ಚೆ ಭಕ್ತಿಚೆ ಅನಿ ದೆವಸ್ಪಾನಾಚೆ ಜಿವನ್ ಕರಾ. ಅಧ್ಯಾಯವನ್ನು ನೋಡಿ |
ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.