Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:7 - ಕನ್ನಡ ಸತ್ಯವೇದವು J.V. (BSI)

7 ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಭಟ್ಟಿಕ್ ಘಾಲುನ್ ಗಾಳುನ್ ಬಗುನ್ ಹಾಳ್ ಹೊಯ್ ನಸಲ್ಲ್ಯಾ ಸೊನ್ಯಾನ್ಬಿ ಜಾಸ್ತಿ ಕಿಮ್ತಿಚೊ ತುಮ್ಚೊ ವಿಶ್ವಾಸ್, ಜೆಜು ಕ್ರಿಸ್ತ್ ದಿಸುನ್ ಯೆತಲ್ಯಾ ಎಳಾರ್ ತುಮ್ಕಾ ಕಿರ್ತಿ, ಮಾನಾ ಅನಿ ಮಹಿಮಾ ಕಮ್ವುನ್ ಘೆಯ್ ಸಾರ್ಕೆ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:7
53 ತಿಳಿವುಗಳ ಹೋಲಿಕೆ  

ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ; ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.


ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಹೀಗಿರಲು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.


ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಆದರೆ ಪೇತ್ರನು ಅವನಿಗೆ - ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


ನಿಮಗಿರುವದನ್ನು ಮಾರಿಬಿಟ್ಟು ದಾನಾ ಕೊಡಿರಿ; ಹಳೇವಾಗದಂಥ ಹಮ್ಮೀಣಿಗಳನ್ನು ಮಾಡಿಕೊಂಡು ಪರಲೋಕದಲ್ಲಿ ಲಯವಾಗದ ದ್ರವ್ಯವನ್ನು ಇಟ್ಟುಕೊಳ್ಳಿರಿ. ಅಲ್ಲಿ ಕಳ್ಳನು ಸಮೀಪಕ್ಕೆ ಬರುವದಿಲ್ಲ; ಅದು ನುಸಿಹಿಡಿದು ನಾಶವಾಗುವದಿಲ್ಲ.


ಅವನ ಧಣಿಯು ಅವನಿಗೆ - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಎಂದು ಹೇಳಿದನು.


ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆದದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿವಿುತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.


ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವದು; ಅವನಿಗೆ ಮಗನಿದ್ದರೆ [ಆ ಮಗನಿಗಾಗಿ] ಅವನ ಕೈಯಲ್ಲಿ ಏನೂ ಇರದು.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು.


ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ; ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿವಸದಲ್ಲಿ ಅದೇ ರೀತಿಯಾಗಿ ಇರುವದು.


ಆದರೆ ಒಳ್ಳೆದನ್ನು ನಡಿಸುವ ಪ್ರತಿಯೊಬ್ಬನಿಗೆ ಪ್ರಭಾವವೂ ಮಾನವೂ ಮನಶ್ಶಾಂತಿಯೂ ಉಂಟಾಗುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.


ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಆದರೆ ನೀವು ಎಷ್ಟರ ಮಟ್ಟಿಗೂ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷವುಳ್ಳವರಾಗಿರ್ರಿ; ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಆದರೆ ಆ ಸ್ತ್ರೀಯು ದುಷ್ಟಳಾಗಿರದೆ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನೂ ಅನುಭವಿಸದೆ ಗರ್ಭವತಿಯಾಗುವಳು.


ಬೆಳ್ಳಿ ಸಿಕ್ಕುವ ಗಣಿಯೂ ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು