Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:8 - ಕನ್ನಡ ಸತ್ಯವೇದವು J.V. (BSI)

8-9 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8-9 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕ್ರಿಸ್ತಾಕ್ ತುಮಿ ಬಗುಕನ್ಯಾಶಿ ಹೊಲ್ಯಾರ್ಬಿ ತುಮಿ ತೆಚೊ ಪ್ರೆಮ್ ಕರ್ತ್ಯಾಸಿ, ಅನಿ ಅತ್ತಾಬಿ ತೊ ತುಮ್ಕಾ ದಿಸಿನಾ ಹೊಲಾ ಹೊಲ್ಯಾರ್ಬಿ ತೆಚೆ ವರ್ತಿ ವಿಶ್ವಾಸ್ ಥವ್ನ್ ಮಹಿಮೆನ್ ಭರಲ್ಲ್ಯಾ ಸಾಂಗುಕ್ ಹೊಯ್ನಾ ತಸ್ಲ್ಯಾ ಕುಶಿನಿ ತುಮಿ ಭರ್ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:8
37 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಎಂದು ಹೇಳಿದನು.


ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವಾದದರಿಂದ ದೇಹದಲ್ಲಿ ವಾಸಿಸುವವರೆಗೂ ಕರ್ತನಿಗೆ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆಂಬದನ್ನು ಬಲ್ಲೆವು.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ನಂಬಿಕೆಯೋ ನಾವು ನಿರೀಕ್ಷಿಸುವವುಗಳ ವಿಷಯವಾಗಿ ಭರವಸದಿಂದಿರುವದೂ ಕಣ್ಣಿಗೆ ಕಾಣದವುಗಳನ್ನು ನಿಜವೆಂದು ತಿಳುಕೊಳ್ಳುವದೂ ಆಗಿದೆ.


ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು.


ನೀವು ಸದ್ಯಕ್ಕೆ ಸ್ವಲ್ಪಕಾಲ ದೇವರ ಚಿತ್ತಾನುಸಾರ ನಾನಾ ಕಷ್ಟಗಳಲ್ಲಿದ್ದು ದುಃಖಿಸುವವರಾಗಿದ್ದರೂ ಆ ಪದವಿಯನ್ನು ಆಲೋಚಿಸಿ ಹರ್ಷಿಸುವವರಾಗಿದ್ದೀರಿ.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.


ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ಆದದರಿಂದ ನಿಮಗೆ ಕ್ರಿಸ್ತ ನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತುಗಳನ್ನು ಕೈಕೊಂಡು ನಡೆಯುವದಿಲ್ಲ; ನೀವು ಆಲಿಸುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯ ಮಾತೇ.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ವರ್ಣಿಸಲಶಕ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರ.


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಅವನ ನುಡಿ ಬಹು ಇಂಪು; ಹೌದು, ಅವನು ಸರ್ವಾಂಗದಲ್ಲಿಯೂ ಮನೋಹರನು; ಯೆರೂಸಲೇವಿುನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಸ್ತ್ರೀರತ್ನವೇ, [ಇತರರ] ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು? ನಮ್ಮಿಂದ ನೀನು ಹೀಗೆ ಪ್ರಮಾಣ ಮಾಡಿಸುವದಕ್ಕೆ [ಇತರರ] ಕಾಂತರಿಗಿಂತ ನಿನ್ನ ಕಾಂತನಲ್ಲಿ ಅತಿಶಯವೇನು?


ನನ್ನ ಪ್ರಾಣಪ್ರಿಯನೇ, [ಮಂದೆಯನ್ನು] ಎಲ್ಲಿ ಮೇಯಿಸುತ್ತೀ, ಮಧ್ಯಾಹ್ನಕ್ಕೆ ಎಲ್ಲಿ ಮಲಗಿಸುತ್ತೀ? ನನಗೆ ತಿಳಿಸು. ನಾನು ಏಕೆ ನಿನ್ನ ಒಡನಾಡಿಗಳ ಮಂದೆಗಳ ಹತ್ತಿರ ಮುಸುಕಿನವಳಂತಿರಬೇಕು?


ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು