Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:16 - ಕನ್ನಡ ಸತ್ಯವೇದವು J.V. (BSI)

16 ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾಚ್ಯಾ ಸೆವಕಾಚ್ಯಾ ಸಾರ್ಕೆ ಸ್ವತಂತ್ರ್ ಹೊವ್ನ್ ಜಿವನ್ ಕರಾ, ತುಮ್ಚೆ ಸ್ವತಂತ್ರ್ ಬುರ್ಶೆ ಧಾಪುಸಾಟ್ನಿ ವಾಪ್ರುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:16
15 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಯಾವನು ಮತ್ತೊಬ್ಬನ ದಾಸನಾಗಿದ್ದು ಕರ್ತನ ಸೇವೆಗೆ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನು. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.


ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದದರಿಂದಲೂ ದೇವರಿಗೆ ಸ್ತೋತ್ರವಾಗಲಿ.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ನೀವು ಬಿಡುಗಡೆಯನ್ನುಂಟುಮಾಡುವ ಧರ್ಮಪ್ರಮಾಣದ ಪ್ರಕಾರ ತೀರ್ಮಾನವನ್ನು ಹೊಂದತಕ್ಕವರೆಂದು ಮಾತಾಡಿರಿ, ನಡೆಯಿರಿ.


ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.


ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.


ಕರ್ತನಿಂದ ಪರಲೋಕ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವೆವೆಂದು ತಿಳಿದಿದ್ದೀರಲ್ಲಾ. ನೀವು ಕರ್ತನಾದ ಕ್ರಿಸ್ತನಿಗೇ ದಾಸರಾಗಿದ್ದೀರಿ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.


ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು