Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:17 - ಕನ್ನಡ ಸತ್ಯವೇದವು J.V. (BSI)

17 ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಸಗ್ಳ್ಯಾ ಲೊಕಾಕ್ನಿ ಮಾನ್ ದಿವಾ, ಅನಿ ತುಮ್ಚ್ಯಾ ವಾಂಗುಡ್ಚ್ಯಾ ವಿಶ್ವಾಸಾತ್ ಹೊತ್ತ್ಯಾ ಭಾವ್ ಭೆನಿಯಾಂಚೊ ಪ್ರೆಮ್ ಕರಾ ದೆವಾಕ್ ಭಿಂವ್ನ್ ಚಲಾ, ಅನಿ ರಾಜಾಕ್ ಮಾನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:17
25 ತಿಳಿವುಗಳ ಹೋಲಿಕೆ  

ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಕ್ರೈಸ್ತ ಸಹೋದರರು ಅಣ್ಣತಮ್ಮಂದಿರೆಂದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಮಾನಮರ್ಯಾದೆಯನ್ನು ತೋರಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಸಹೋದರ ಸ್ನೇಹವು ನೆಲೆಯಾಗಿರಲಿ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ದಾಸರಾಗಿ ಮತ್ತೊಬ್ಬರ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ಮಾನಕ್ಕೂ ಯೋಗ್ಯರೆಂದೆಣಿಸಲಿ; ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದೆ ಉಂಟಾದೀತು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ತಲೆನರೆತ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.


ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.


ಒರಟು ಮೋರೆಯು ಮಾರ್ಪಡುವದು. ದೇವರ ಮೇಲೆ ಇಟ್ಟ ಆಣೆಯ ನಿವಿುತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬದು ನನ್ನ ಬೋಧೆ.


ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು.


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ - ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ಆತನನ್ನೂ ಅರಸನನ್ನೂ ನಮಸ್ಕರಿಸಿದರು.


ನಿಮ್ಮೊಳಗೆ ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳುಕೊಳ್ಳುವರು ಅಂದನು.


ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.


ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಅದಕ್ಕೆ ಅಬ್ರಹಾಮನು - ಈ ಸ್ಥಳದವರು ದೇವರ ಭಯವಿಲ್ಲದವರಾಗಿ ನನ್ನ ಹೆಂಡತಿಯ ನಿವಿುತ್ತ ನನ್ನನ್ನು ಕೊಂದಾರೆಂದು ನೆನಸಿದೆನು.


ಕೂಡಲೆ ಯೆಹೂದಕ್ಕೂ ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು ಒಗ್ಗಟ್ಟೆಂಬ ನನ್ನ ಎರಡನೆಯ ಕೋಲನ್ನು ಕತ್ತರಿಸಿಬಿಟ್ಟೆನು.


ಮನುಷ್ಯರು ನೇವಿುಸಿರುವ ಯಾವ ಅಧಿಕಾರಕ್ಕಾದರೂ ಕರ್ತನ ನಿವಿುತ್ತ ಅಧೀನರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು