1 ಪೇತ್ರನು 2:2 - ಕನ್ನಡ ಸತ್ಯವೇದವು J.V. (BSI)2 ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತುಮಿ ಅತ್ತಾ ನ್ಹವಿನ್ ಉಪಾಜಲ್ಲ್ಯಾ ಬಾಳ್ಸ್ಯಾಂಚ್ಯಾ ಸಾರ್ಕೆ ಹೊವಾ ತುಮಿ ಕನ್ನಾಬಿ ಪವಿತ್ರ್ ಆತ್ಮಿಕ್ ದುದ್ದಾಕ್ ಆಸ್ಯಾ ಕರಾ ಅಸೆ ತೆ ಫಿಲ್ಲ್ಯಾ ವೈನಾ ತುಮಿ ವಾಡ್ತ್ಯಾನಾ ಅನಿ ಸುಟ್ಕಾ ಜೊಡುನ್ ಘೆತ್ಯಾಶಿ. ಅಧ್ಯಾಯವನ್ನು ನೋಡಿ |