1 ಪೇತ್ರನು 2:8 - ಕನ್ನಡ ಸತ್ಯವೇದವು J.V. (BSI)8 ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ಎಕ್ ಕಡೆ ಪವಿತ್ರ್ ಪುಸ್ತಕ್ ಮನ್ತಾ; ಲೊಕಾಕ್ನಿ ಆಡ್ಕಳ್ತಲೊ ಗುಂಡೊ ಹ್ಯೊ ಲೊಕಾ ಆದ್ಳುನ್ ಪಡಿಸಾರ್ಕೆ ಕರ್ತಾ ತೆನಿ ದೆವಾಚಿ ಇಚ್ಚ್ಯಾ ಕಾಯ್ ಮನ್ತಲ್ಲ್ಯಾ ಗೊಸ್ಟಿ ವರ್ತಿ ವಿಶ್ವಾಸ್ ಕರಿನಾತ್ ತಸೆ ಮನುನ್ ತೆನಿ ಅದಳ್ತಾತ್. ಅಧ್ಯಾಯವನ್ನು ನೋಡಿ |