Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:14 - ಕನ್ನಡ ಸತ್ಯವೇದವು J.V. (BSI)

14 ಒಂದು ವೇಳೆ ನೀತಿಯ ನಿವಿುತ್ತವೇ ಬಾಧೆಪಟ್ಟರೆ ನೀವು ಧನ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಬರೆ ಕರ್ತನಾ ಬಿ ತುಮ್ಕಾ ತರಾಸ್ ಸೊಸುಕ್ ಗಾವ್ತಾ ಹೊಲ್ಯಾರ್ ತುಮ್ಚೆ ನಸಿಬ್ ಕೌಡೆ ಖರೆ! ಕೊನ್ ಬಿ ತುಮ್ಕಾ ತರಾಸ್ ಸೊಸುಕ್ ಗಾವ್ತಾ ಹೊಲ್ಯಾರ್ ತುಮಿ ನಿತಿವಂತ್ ! ತೆಕಾ ತುಮಿ ಭಿಂವ್ತಲೆ ನಕ್ಕೊ ಅನಿ ಚಿಂತುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:14
29 ತಿಳಿವುಗಳ ಹೋಲಿಕೆ  

ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ನನ್ನ ನಿವಿುತ್ತವೂ ಸುವಾರ್ತೆಯ ನಿವಿುತ್ತವೂ ಮನೆಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವನೋ


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿಯೂ ಸುವಾರ್ತೆಯ ನಿವಿುತ್ತವಾಗಿಯೂ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.


ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು ಎಂದು ಬರೆದದೆ. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ.


ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳಕೊಳ್ಳುವನು; ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.


[ಅದಕ್ಕೆ ನಾನು] - ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು; ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲಮಾಡಬೇಡ; ನಿನ್ನ ನಿವಿುತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ಅವರಿಗೆ ಅಂಜಬೇಡ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು ಎಂದು ಹೇಳಿದನು.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.


ಆದದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ನಿನ್ನ ಹಣೆಯನ್ನು ಕಗ್ಗಲ್ಲಿಗಿಂತ ಕಠಿನವಾದ ವಜ್ರದಷ್ಟು ಕಠಿನಪಡಿಸಿದ್ದೇನೆ; ಅವರು ದ್ರೋಹಿವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.


ಫಕ್ಕನೆ ಬರುವ ಅಪಾಯಕ್ಕಾಗಲಿ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವದೇ ಇಲ್ಲ.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು