Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:15 - ಕನ್ನಡ ಸತ್ಯವೇದವು J.V. (BSI)

15 ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತುಮ್ಚ್ಯಾ ಬರೊಸ್ಯಾಕ್ ಆಧಾರ್ ಕಾಯ್ ಮನುನ್ ಇಚಾರ್ತಲ್ಯಾಕ್ನಿ ಜಬಾಬ್ ದಿವ್ಕ್ ತಯಾರ್ ರ್‍ಹಾವಾ, ಖರೆ ತುಮ್ಚ್ಯಾ ಮನಾತ್ನಿ ಕ್ರಿಸ್ತಾಚಿ ಭಕ್ತಿ ರ್‍ಹಾಂವ್ದಿತ್ ಅನಿ ಧನಿ ಮನುನ್ ತೆಕಾ ಮಾನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:15
34 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಇಂಪಾಗಿಯೂ ರಸವತ್ತಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರಹೇಳಬೇಕೋ ಅದನ್ನು ತಿಳಿದುಕೊಳ್ಳುವಿರಿ.


ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ


ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ ನಿಮ್ಮ ಪಿತೃಗಳಿಗೋಸ್ಕರವೂ ನಡಿಸಿದ ನೀತಿಕಾರ್ಯಗಳನ್ನು ಕುರಿತು ಆತನೆದುರಿನಲ್ಲಿ ನಿಮಗೆ ನೆನಪು ಹುಟ್ಟಿಸಿ ನಿಮ್ಮನ್ನು ಎಚ್ಚರಿಸುತ್ತೇನೆ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು,


ಅರಸುಗಳ ಮುಂದೆಯೂ ನಿನ್ನ ಕಟ್ಟಳೆಗಳ ವಿಷಯದಲ್ಲಿ ಮಾತಾಡುವೆನು; ನಾಚಿಕೆಪಡುವದಿಲ್ಲ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಜಡೆಹೆಣೆದುಕೊಳ್ಳುವದು ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದು ವಸ್ತ್ರಗಳನ್ನು ಧರಿಸಿಕೊಳ್ಳುವದು ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ಯಾಕೋಬ್ಯರ ಅರಸನಾದ ಯೆಹೋವನು ಹೀಗನ್ನುತ್ತಾನೆ - ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡಿಸುವ ಕೆಲಸವನ್ನು ನೋಡಿ ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾವಿುಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲ್ಯರ ದೇವರಿಗೆ ನಡುಗುವರು.


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ಅದಕ್ಕೆ ಪೌಲನು - ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.


ಆಗ ಯೆಹೋವನು ಮೋಶೆ ಆರೋನರಿಗೆ - ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲ್ಯರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆಹೋದದರಿಂದ ಈ ಸಮೂಹದವರನ್ನು ನಾನು ಅವರಿಗೆ ವಾಗ್ದಾನ ಮಾಡಿದ ದೇಶದೊಳಕ್ಕೆ ನೀವು ಕರಕೊಂಡು ಹೋಗಕೂಡದು ಎಂದು ಹೇಳಿದನು.


ಚಿನ್ ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದದರಿಂದ ಆ ದೇಶವನ್ನು ಸೇರಬಾರದು ಎಂದು ಹೇಳಿದನು. ಚಿನ್ ಅರಣ್ಯದಲ್ಲಿ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.


ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ; ದುಷ್ಟನ ಬಾಯಿ ಕೆಟ್ಟದ್ದನ್ನು ಕಕ್ಕುತ್ತದೆ.


ಉಚಿತಾಲೋಚನೆ, ತಿಳುವಳಿಕೆ ಇವುಗಳ ವಿಷಯವಾಗಿ ಇದಕ್ಕೆ ಮುಂಚೆಯೇ ನಿನಗೋಸ್ಕರ ಬರೆದಿದ್ದೇನಲ್ಲವೆ.


ಇವರು ಯಾವದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು