Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:16 - ಕನ್ನಡ ಸತ್ಯವೇದವು J.V. (BSI)

16 ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಹೆ ಕಾಮ್ ತುಮಿ ಬರ್‍ಯಾ ಪಾನಾನ್ ಅನಿ ಗೌರವಾನ್ ಕರಾ ತುಮ್ಚೊ ಮನ್ ಪವಿತ್ರ್ ರಾಂವ್ದಿತ್, ಅಸೆ ತನ್ನಾ ತುಮ್ಚ್ಯಾ ವಿಶಯಾತ್ ಬುರ್ಶಿ ಗೊಸ್ಟಿಯಾ ಬೊಲ್ತಲೆ ತುಮಿ ಕ್ರಿಸ್ತಾತ್ ಬರೆ ಹೊವ್ನ್ ಜಿವನ್ ಕರ್ತಲೆ ಬಗುನ್ ಅಪ್ನಿ ಸಾಂಗಲ್ಲ್ಯಾ ಬುರ್ಶ್ಯಾ ಸಂಗ್ತಿಯಾಕ್ನಿ ತೆನಿಚ್ ಮರ್ಯಾದ್ ಕರುನ್ ಘೆಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:16
19 ತಿಳಿವುಗಳ ಹೋಲಿಕೆ  

ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಮನಸ್ಸಿನಿಂದ ಒಳ್ಳೇ ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.


ತಿಳಿಯದೆ ಮಾತಾಡುವ ಮೂಢಜನರ ಬಾಯನ್ನು ನೀವು ಒಳ್ಳೇ ನಡತೆಯಿಂದ ಕಟ್ಟಬೇಕೆಂಬದೇ ದೇವರ ಚಿತ್ತ.


ಆಗ ನಮ್ಮನ್ನು ಎದುರಿಸುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವದಕ್ಕೆ ಅವಕಾಶವಿಲ್ಲದೆ ನಾಚಿಕೊಳ್ಳುವರು.


ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ.


ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಬಿಡದೆ ಹಿಡುಕೋ. ಕೆಲವರು ಮನಸ್ಸಿನ ಒಳ್ಳೇ ಸಾಕ್ಷಿಯನ್ನು ತಳ್ಳಿಬಿಟ್ಟು ಕ್ರಿಸ್ತ ನಂಬಿಕೆಯ ವಿಷಯದಲ್ಲಿ ಹಡಗು ಒಡೆದು ನಷ್ಟಪಟ್ಟವರಂತೆ ಇದ್ದಾರೆ; ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ;


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ.


ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.


ತಾವು ಮಾಡುವ ಅಪರಿವಿುತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು