Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:20 - ಕನ್ನಡ ಸತ್ಯವೇದವು J.V. (BSI)

20 ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಹೊ ಆತ್ಮೊ ಖಲೊ ಮಟ್ಲ್ಯಾರ್, ನೊಯೆ ಢೊನ್ ಬಾಂದ್ತಾನಾ ಶಾಂತ್ಪಾನಾನ್ ರಾಕುನ್ಗೆತ್ ಹೊತ್ತ್ಯಾ ದೆವಾನ್ ತನ್ನಾ ಆಟ್ ಲೊಕಾ ತವ್ಡಿಚ್ ಪಾನಿಯಾಕ್ನಾ ಹುರ್‍ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:20
28 ತಿಳಿವುಗಳ ಹೋಲಿಕೆ  

ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.


ಮನುಷ್ಯರ ಕೆಟ್ಟತನವು ಭೂವಿುಯ ಮೇಲೆ ಹೆಚ್ಚಾಗಿರುವದನ್ನೂ ಅವರು ಹೃದಯದಲ್ಲಿ ಯೋಚಿಸುವದೆಲ್ಲವು ಯಾವಾಗಲೂ ಬರೀ ಕೆಟ್ಟದ್ದಾಗಿರುವದನ್ನೂ


ನೋಹನು ಹೆಂಡತಿ - ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.


ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.


ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳೂ ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಆದರೆ ನೋಹನಿಗೆ ಯೆಹೋವನ ದಯವು ದೊರಕಿತು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ,


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು