Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:4 - ಕನ್ನಡ ಸತ್ಯವೇದವು J.V. (BSI)

4 ಜಡೆಹೆಣೆದುಕೊಳ್ಳುವದು ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದು ವಸ್ತ್ರಗಳನ್ನು ಧರಿಸಿಕೊಳ್ಳುವದು ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸಾತ್ವಿಕವೂ ಶಾಂತವೂ ಆದ ಆಂತರ್ಯವೇ ನಿಮ್ಮ ಸೌಂದರ್ಯವಾಗಿರಬೇಕು. ಆ ಸೌಂದರ್ಯ ನಶಿಸಿಹೋಗುವುದಿಲ್ಲ. ಅದು ದೇವರಿಗೆ ಬಹು ಅಮೂಲ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹೆಚ್ಯಾ ಬದ್ಲಾಕ್ ಭುತ್ತುರ್ಲೊ ಮನ್ ಎಕ್ ಬೊಳ್ಯಾ ಪಾನಾನ್ ಅನಿ ಶಾಂತ್ಪಾನಾಚ್ಯಾ ಆತ್ಮ್ಯಾನ್ ಭರುನ್ ನಾಸ್ ಹೊಯ್‍ ನಸಲ್ಲ್ಯಾ ಶಿಂಗಾರ್ ಭರಲ್ಲೆ ರ್‍ಹಾಂವ್ದಿ, ತೆ ದೆವಾಚ್ಯಾ ನದ್ರೆಕ್ ಲೈ ಕಿಮ್ತಿಚೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:4
40 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಯಾರನ್ನೂ ದೂಷಿಸದೆ ಕುತರ್ಕಮಾಡದೆ ಎಲ್ಲಾ ಮನುಷ್ಯರಿಗೆ ಪೂರ್ಣ ಸಾಧುಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ ಅವರಿಗೆ ಜ್ಞಾಪಕಕೊಡು.


ಕುರುಡನಾದ ಫರಿಸಾಯನೇ, ಮೊದಲು ಪಂಚಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು. ಆಗ ಅವುಗಳ ಹೊರಭಾಗವೂ ಶುಚಿಯಾಗುವದು.


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ.


ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ.


ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ.


ನೀವು ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ


ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.


ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.


ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡಿಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.


ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಇಂಥವರು ತಮ್ಮ ಕೆಲಸವನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.


ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.


ದೀನರು ಯೆಹೋವನಲ್ಲಿ ಹೆಚ್ಚುಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲ್ಯರ ಸದಮಲಸ್ವಾವಿುಯಲ್ಲಿ ಉಲ್ಲಾಸಿಸುವರು.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ; ದುಷ್ಟರನ್ನು ನೆಲಕ್ಕೆ ಹತ್ತಿಸಿಬಿಡುತ್ತಾನೆ.


ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ಇಂಥವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವದಿಲ್ಲ.


ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿದ್ದೇನೆ; ತಾಯಿಯ ಬಳಿಯಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತಿದೆ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ನಾಲ್ಕನೆಯ ವರುಷ ಚಿದ್ಕೀಯನೊಡನೆ ಬಾಬೆಲಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರಂದರೆ ಸರಬರಾಯಿ ಕಾರುಬಾರಿ.)


ಲಯವಿಲ್ಲದ ದೇವರ ಮಹಿಮೆಯನ್ನು ಬಿಟ್ಟು ಅದಕ್ಕೆ ಬದಲಾಗಿ ಲಯವಾಗುವ ಮನುಷ್ಯ ಪಶು ಪಕ್ಷಿ ಸರ್ಪಾದಿಗಳ ಮೂರ್ತಿಯನ್ನು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು