1 ಪೇತ್ರನು 3:7 - ಕನ್ನಡ ಸತ್ಯವೇದವು J.V. (BSI)7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.