Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:9 - ಕನ್ನಡ ಸತ್ಯವೇದವು J.V. (BSI)

9 ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ವಾಯ್ಟ್ ಕರ್ತಲ್ಯಾಕ್ನಿ ವಾಯ್ಟ್ ಕರುನಕಾಸಿ, ಅನಿ ನಿಂದ್ಯಾ ಕರ್ತಲ್ಯಾಕ್ನಿ ಅನಿ ಪರ್ತುನ್ ನಿಂದ್ಯಾ ಕರಿನಸ್ತಾನಾ ತೆಚ್ಯಾ ಬದ್ಲಾಕ್ ತೆಕಾ ತುಮಿ ಆಶಿರ್ವಾದ್ ದಿವಾ, ಕಶ್ಯಾಕ್ ಮಟ್ಲ್ಯಾರ್, ದೆವಾನ್ ತುಮ್ಕಾ ಬಲ್ವಲ್ಲ್ಯಾ ತನ್ನಾ ತುಮ್ಕಾ ಗೊಸ್ಟ್ ದಿಲ್ಲಿ ಆಶಿರ್ವಾದಾಚ್ಯಾ ವಿಶಯಾತುಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:9
26 ತಿಳಿವುಗಳ ಹೋಲಿಕೆ  

ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವವಾದದ್ದೋ ಅದನ್ನೇ ಯೋಚಿಸಿ ಸಾಧಿಸಿರಿ.


ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು.


ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದಮಾಡಿರಿ; ಶಪಿಸದೆ ಆಶೀರ್ವದಿಸಿರಿ.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡುತಪ್ಪದು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ನಿಜವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.


ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -


ಆಮೇಲೆ ಯೋಸೇಫನು ತನ್ನ ಆಳುಗಳಿಗೆ - ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆಮಾಡಲು ಅವರು ಹಾಗೆಯೇ ಮಾಡಿದರು.


ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ


ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳಿಗೋ ಸುಖವು ಸೊತ್ತಾಗುವದು.


ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ನಡೆದದ್ದನ್ನು ಇಲ್ಲದ ಹಾಗೆ ಮಾಡುವದಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು