Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:16 - ಕನ್ನಡ ಸತ್ಯವೇದವು J.V. (BSI)

16 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಪ್ರತಿಯಾಗಿ, ಒಬ್ಬನು ಕ್ರೈಸ್ತವಿಶ್ವಾಸಿ ಎಂಬ ಕಾರಣದಿಂದ ಹಿಂಸೆಯನ್ನು ಅನುಭವಿಸಿದರೆ ಅಂಥವನು ನಾಚಿಕೆಪಡಬೇಕಾಗಿಲ್ಲ; ಕ್ರೈಸ್ತವಿಶ್ವಾಸಿ ಎಂಬ ಆ ಹೆಸರನ್ನು ಪಡೆದುದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಕ್ರೈಸ್ತರಾಗಿರುವುದರಿಂದ ಸಂಕಟಪಟ್ಟರೆ, ನಾಚಿಕೊಳ್ಳಬಾರದು. ಆ (ಕ್ರೈಸ್ತ) ಹೆಸರಿನ ನಿಮಿತ್ತ ನೀವು ದೇವರಿಗೆ ಸ್ತೋತ್ರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವವರಾಗಿ ಬಾಧೆಪಟ್ಟರೆ ನಾಚಿಕೆಪಡಬೇಡಿರಿ. ಆ ಹೆಸರನ್ನು ಹೊಂದಿದ್ದಕ್ಕಾಗಿ ದೇವರನ್ನು ಘನಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮಿ ಎಕ್ ಕ್ರಿಸ್ತಾಚ್ಯಾ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ತುಮ್ಕಾ ತರಾಸ್ ಗಾವ್ತಾ ಹೊಲ್ಯಾರ್ ತುಮಿ ಲಜುಚೆ ನ್ಹಯ್, ಖರೆ ತುಮಿ ಕ್ರಿಸ್ತಾಚ್ಯಾ ನಾವಾಸಾಟ್ನಿ ದೆವಾಕ್ ಧನ್ಯವಾದ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:16
20 ತಿಳಿವುಗಳ ಹೋಲಿಕೆ  

ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು.


ಅದಕ್ಕೆ ಅಗ್ರಿಪ್ಪನು - ಅಲ್ಪಪ್ರಯತ್ನದಿಂದ ನನ್ನನ್ನು ಕ್ರೈಸ್ತನಾಗುವದಕ್ಕೆ ಒಡಂಬಡಿಸುತ್ತೀಯಾ? ಎಂದು ಹೇಳಲು


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಮೂಡಣವರೇ, ಯೆಹೋವನನ್ನು ಸನ್ಮಾನಿಸಿರಿ; ಕರಾವಳಿಯವರೇ, ಇಸ್ರಾಯೇಲ್ಯರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ ಎಂದು ಕೂಗುವರು.


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.


ನೀವು ಕರೆಸಿಕೊಳ್ಳುವ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು