Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:19 - ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಸೆ ರ್‍ಹಾತಾನಾ ಜೆ ಕೊನ್ ಕಸ್ಟ್ ಸೊಸುನ್ಗೆತಾ ತೆನಿ ತೆಂಚ್ಯಾ ಬರ್‍ಯಾ ಕಾಮಾಂಚ್ಯಾ ವೈನಾ ಅಪ್ನಾಕ್ ರಚಲ್ಲ್ಯಾಚೆ ಬರೊಸೊ ಥವ್ನ್ ರ್‍ಹಾತ್ಯಾತ್ ಅನಿ ತೊ ಅಪ್ನಾಚೆ ಗೊಸ್ಟ್ ಕನ್ನಾಬಿ ಪಾಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:19
27 ತಿಳಿವುಗಳ ಹೋಲಿಕೆ  

ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.


ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಕೃಪೆಯು ಶಾಶ್ವತವಾದದ್ದು; ನೀನು ಕೈಹಚ್ಚಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ತಿಳಿಯದೆ ಮಾತಾಡುವ ಮೂಢಜನರ ಬಾಯನ್ನು ನೀವು ಒಳ್ಳೇ ನಡತೆಯಿಂದ ಕಟ್ಟಬೇಕೆಂಬದೇ ದೇವರ ಚಿತ್ತ.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಕೆಯುಳ್ಳ ದೇವರೇ, ನನ್ನನ್ನು ವಿಮೋಚಿಸಿದ್ದೀ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು