Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:3 - ಕನ್ನಡ ಸತ್ಯವೇದವು J.V. (BSI)

3 ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚಿ ಲೈಂಗಿಕ್ ಪಾನಾಚಿ ಪಾಪ್ ಕರುಕ್ ಪೊಜ್ಡೆಪಾನ್, ಫಿದೊಡೆಪಾನ್, ಗಮ್ಮತ್ ಕರ್ತಲೆ, ಅನಿ ಮುರ್ತಿ ಪುಜ್ಯಾಚ್ಯಾ ಬುರ್ಶ್ಯಾ ಚಾಲಿಕ್ ಪಡಲೆ ಹೊಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:3
30 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆಯುವವರಾಗಿರದೆ


ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡಿಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ; ಇದು ಕರ್ತನಾದ ಯೆಹೋವನ ನುಡಿ,


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ಇದಲ್ಲದೆ ನೀನು ಆ ದ್ರೋಹಿಗಳಿಗೆ ಅಂದರೆ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ -


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ನೀವು ಅಜ್ಞಾನಿಗಳಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕ ವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.


ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು,


ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೆಯೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಪಾಡು ಏನು ಹೇಳಲಿ!


ಆಸನು ಓಬೇದನ [ಮಗನಾದ ಅಜರ್ಯನ] ಈ ಪ್ರವಾದನೋಕ್ತಿಗಳನ್ನು ಕೇಳಿದಾಗ ಧೈರ್ಯಗೊಂಡು ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದುಹಾಕಿ ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಆತನ ಯಜ್ಞವೇದಿಯನ್ನು ಜೀರ್ಣೋದ್ಧಾರಮಾಡಿಸಿದನು.


ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು