Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:4 - ಕನ್ನಡ ಸತ್ಯವೇದವು J.V. (BSI)

4 ತಾವು ಮಾಡುವ ಅಪರಿವಿುತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮಿ ಬುರ್ಶಿ ಅನಿ ಉಪೆಗಾಕ್ ನಸಲ್ಲಿ ಗೊಸ್ಟಿಯಾ ಬೊಲಿನಸಲ್ಲೆ ಬಗಲಿ ದೆವಾಚೆರ್ ವಿಶ್ವಾಸ್ ನಸಲ್ಲಿ ಲೊಕಾ ತುಮ್ಚ್ಯಾ ವಿಶಯಾತ್ ಅಜಾಪ್ ಹೊತಾತ್, ತಸೆ ಹೊವ್ನ್ ತೆನಿ ತುಮ್ಚ್ಯಾ ವಿಶಯಾತ್ ಬುರ್ಶಿ ಸಂಗ್ತಿಯಾ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:4
11 ತಿಳಿವುಗಳ ಹೋಲಿಕೆ  

ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಆದರೆ ಈ ಜನರು ತಮಗೆ ಗೊತ್ತಿಲ್ಲದ ಎಲ್ಲವನ್ನೂ ದೂಷಿಸುತ್ತಾರೆ, ಮತ್ತು ತಾವು ವಿವೇಕಶೂನ್ಯಪಶುಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳುವದಕ್ಕೆ ಹೋಯಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ನಡೆದಿದ್ದಾರೆ.


ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ಅವು ಒಳಗೆ ಸುಲುಕೊಂಡವುಗಳಿಂದಲೂ ಇಹಭೋಗ ಪದಾರ್ಥಗಳಿಂದಲೂ ತುಂಬಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು