1 ಪೇತ್ರನು 4:6 - ಕನ್ನಡ ಸತ್ಯವೇದವು J.V. (BSI)6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಿಗಳಾಗಿದ್ದಾಗ ಹೊಂದಿದರು; ಅವರು ಆತ್ಮ ಸಂಬಂಧವಾಗಿ ದೇವರ ಜೀವದಲ್ಲಿ ಪಾಲುಗಾರರಾಗುವಂತೆ ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹ್ಯಾ ಕಾರನಾಸಾಟ್ನಿ ಮರಲ್ಲ್ಯಾಕ್ನಿ ಸೈತ್ ಬರಿ ಖಬರ್ ಸಾಂಗುನ್ ಹೊಲಿ, ಅಸೆ ಸಗ್ಳ್ಯಾಕ್ನಿ ಆಂಗಾ ಮಾಸಾಚ್ಯಾ ರುಪಾತ್ ಝಡ್ತಿ ಕರುನ್ ಹೊಲ್ಲೆ ರ್‍ಹಾಲ್ಯಾರ್‍ಬಿ ತೆನಿ ಆತ್ಮಿಕ್ ರುಪಾನ್ ದೆವಾಚೆ ಜಿವನ್ ಕರುಚೆ. ಅಧ್ಯಾಯವನ್ನು ನೋಡಿ |
ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.