Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:7 - ಕನ್ನಡ ಸತ್ಯವೇದವು J.V. (BSI)

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಗ್ಳ್ಯಾಚೆ ಅಂತ್ ಜಗೊಳ್ ಯೆಲಾ, ತೆಚ್ಯಾ ಸಾಟ್ನಿ ತುಮ್ಚ್ಯಾ ಮಾಗ್ನಿಂಚ್ಯಾ ಸಾಟ್ನಿ ತುಮಿ ಹುಶಾರ್‍ಕಿನ್ ಅನಿ ಶಿಸ್ತಿನ್ ರ್‍ಹಾವ್ಚೆ, ಅನಿ ತುಮ್ಕಾ ಸಂಬಾಳುನ್ ಘೆವ್ನ್ ಜಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:7
34 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಸಭೆಯಾಗಿ ಕೂಡಿಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿಸೋಣ. ಕರ್ತನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.


ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ.


ಪ್ರಳಯವು ಬಂತು, ಪೂರ್ಣಪ್ರಳಯವು ಬಂತು, ನಿನ್ನನ್ನು ಚಚ್ಚುವದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು!


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.


ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿ.


ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,


ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು.


ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು